Gl harusha
ಸ್ಥಳೀಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ: ಚಾಲಕ ಚೇತನ್ ಕುಮಾರ್ ಮೃತ್ಯು, ಪ್ರಯಾಣಿಕರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

srk ladders
Pashupathi

ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ವ್ಯಕ್ತಿ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಿಂದ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಬಸ್ಸಿನಲ್ಲಿದ್ದ ಎಲ್ಲರನ್ನೂ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ