Gl
ಸ್ಥಳೀಯ

ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಳ್ಳತನ!! | ಮೊಟ್ಟೆನ ಆಮ್ಲೆಟ್ ಮಾಡಿದ್ರು, ಟಾಯ್ಲೆಟಿಗೆ ಮಣ್ಣು ಸುರಿದ್ರು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

core technologies

ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು, ಪಾತ್ರೆಗಳನ್ನು ಬೆಂಕಿಯಲ್ಲಿ ಕರಟಿದ್ದಾರೆ. ಬಿಸಿಯೂಟದ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಟಾಯ್ಲೆಟ್ ಬೇಸಿನ್‍ ಗೆ ಮಣ್ಣು ತುಂಬಿಸಿ ಹೋಗಿದ್ದಾರೆ ಎನ್ನಲಾಗಿದೆ.

ಅಷ್ಟಕ್ಕೂ ಬಿಡದ ಕಳ್ಳರು ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಬಿಆರ್ ಸಿ ಕೇಂದ್ರದ ಬೀಗ ಒಡೆದು ಚಿಲ್ಲರೆ ಹಣ ಕದ್ದೊಯ್ದ ಘಟನೆಯೂ ನಡೆದಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119