ಸ್ಥಳೀಯ

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ ಜೆ.ಎಲ್. ಆಡಿಟೋರಿಯಂನಲ್ಲಿ ನಡೆಯಲಿದೆ.

maithri

ಬೆಳಗ್ಗೆ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದಶಮಾನೋತ್ಸವ ಸಮಿತಿ ಅಧ್ಯಕ್ಷ ರವಿಶಂಕರ್ ಸಿ ಮೂಡಂಬೈಲು ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ವಿಟ್ಲ ಅರಮನೆಯ ಕೆ. ಕೃಷ್ಣಯ್ಯ, ವಿಟ್ಲ ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕ ಕೇಶವ್ ಆರ್.ವಿ., ಜೇನುಗಡ್ಡದಾರಿ ಕಲಾ ಪೋಷಕ ಕಲಾ ನಿರ್ದೇಶಕ ಕುಮಾರ ಪೆರ್ನಾಜೆ ಭಾಗವಹಿಸಲಿದ್ದಾರೆ.

ಸ್ವರ ಸಿಂಚನ ಪುರಸ್ಕಾರ:

ಪಿಟೀಲು ವಾದಕ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್, ಹಿರಿಯ ಯಕ್ಷಗಾನ ಭಾಗವತ ಎಸ್ ಎಲ್ ಗೋವಿಂದ ನಾಯಕ್ ಪಾಲೆಚ್ಚಾರು, ಅವರಿಗೆ ಸನ್ಮಾನ ನಡೆಯಲಿದೆ.

ನಂತರ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ವಯಲಿನ್ ಕಛೇರಿ, ಸಹ ಶಿಕ್ಷಕಿ ಸಿಂಚನ ಲಕ್ಷ್ಮಿ ಕೊಡಂದೂರು ಅವರಿಂದ ಸಂಗೀತ ಹಾಗೂ ವಯಲಿನ್ ಜುಗಲ್ ಬಂಧಿ ನಡೆಯಲಿದೆ. ಮೃದಂಗ ವಾದಕರಾಗಿ ವಿದ್ವಾನ್ ಡಾ. ವಿ.ಆರ್ ನಾರಾಯಣ ಪ್ರಕಾಶ್ ಕ್ಯಾಲಿಕಟ್, ಪಿಟೀಲು ವಾದಕರಾಗಿ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್, ಘಟಂ ವಾದಕರಾಗಿ ವಿದ್ವಾನ್ ಆಲುವ ರಾಜೇಶ್ ಕ್ಯಾಲಿಕಟ್ ಮೃದಂಗ, ಕ್ಶಿತೀಶ ರಾಮ ಕೆ ಎಸ್ ಸುಳ್ಯ ಸಹಕರಿಸಲಿದ್ದಾರೆ ಎಂದು ಸ್ವರಸಿಂಚನ ಕಲಾತಂಡದ ಮುಖ್ಯಶಿಕ್ಷಕಿ ಸವಿತಾ ಕೊಡಂದೂರು, ರಘುರಾಮ ಶಾಸ್ತ್ರಿ  ಕೊಡಂದೂರು, ಸಿಂಚನ ಲಕ್ಷ್ಮಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124