ಸ್ಥಳೀಯ

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ | ಹಠ, ಛಲದಿಂದ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ

GL

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ. ಹಾಗೆ ಜೀವನದಲ್ಲಿ ಹಠ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕ, ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಹೇಳಿದರು.

core technologies

ವಿಟ್ಲದ ಜಿಎಲ್ ಆಡಿಟೋರಿಯಂನಲ್ಲಿ ಡಿ. 14ರಂದು ನಡೆದ ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಅವರು ಮಾತನಾಡಿದರು.

akshaya college

ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡಿದರು. ಅವರಿಗೆ ಸ್ವರ ಸಿಂಚನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ವಿಟ್ಲ ಅರಮನೆಯ ಕೆ ಕೃಷ್ಣಯ್ಯ, ವಿಟ್ಲಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕ ಕೇಶವ ಆರ್ ವಿ ಸಂದರ್ಭೋಚಿತವಾಗಿ ಮಾತನಾಡಿದರು.

ಯಕ್ಷಗಾನ ಭಾಗವತ ಎಲ್ಎಂ ಗೋವಿಂದ ನಾಯಕ್ ಪಾಲ್ಹೆಚ್ಚಾರು ಅವರಿಗೆ ಸನ್ಮಾನ ಮಾಡಲಾಯಿತು. ಶಿಕ್ಷಕಿ ಸವಿತಾ ಕೋಡಂದೂರ್, ರಘುರಾಮ ಶಾಸ್ತ್ರಿ ಕೋಡಂದೂರ್ ದoಪತಿಯನ್ನು ಸನ್ಮಾನಿಸಲಾಯಿತು.

ವಿದ್ವಾನ್ ಬಿ.ಗಿರೀಶ್ ಕುಮಾರ್ ಪುತ್ತೂರು, ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು, ಕೃಷ್ಣ ಭಟ್ ವಿಟ್ಲ ಮುಂತಾದವರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ದಶಮಾನೋತ್ಸವ ಸಮಿತಿ ಅಧ್ಯಕ್ಷ, ಸ್ವರ ಸಿಂಚನ ಸಂಗೀತ ಶಾಲೆ ಅಧ್ಯಕ್ಷರಾದ ರವಿಶಂಕರ್ ಸಿ ಮೂಡಂಬೈಲು ಮಾತನಾಡಿ, ಸವಿತಾ ಕೋಡಂದೂರ್ ಅವರು ಗ್ರಾಮೀಣ ಪ್ರದೇಶದಲ್ಲಿದ್ದು ಸಂಗೀತ ಆಸಕ್ತರಿಗೆ ವಿದ್ಯೆಯನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಸಂಗೀತ ಶಿಕ್ಷಕಿ ಸವಿತಾ ಕೋಡಂದೂರ್ ಸ್ವಾಗತಿಸಿ, ವರದಿ ವಾಚಿಸಿದರು. ರಮೇಶ್ ಬಿಕೆ ವಂದಿಸಿದರು. ಪರಮೇಶ್ವರ್ ಹೆಗಡೆ ಚಂದ್ರಶೇಖರ್ ಕೆ ಕಾರ್ಯಕ್ರಮ ನಿರೂಪಿಸಿದರು.

ನಂತರ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ವಯಲಿನ್ ಕಚೇರಿ, ಸಿಂಚನ ಲಕ್ಷ್ಮಿ ಕೊಡಂದೂರು (ಸಹ ಶಿಕ್ಷಕಿ) ಇವರಿಂದ ಸಂಗೀತ ಹಾಗೂ ವಯಲಿನ್ ಜುಗಲ್ ಬಂದಿ ಪಕ್ಕ ವಾದ್ಯದಲ್ಲಿ ಮೃದಂಗವಾದಕರಾಗಿ ವಿದ್ವಾನ್ ಡಾ.ವಿ.ಆರ್ ನಾರಾಯಣ ಪ್ರಕಾಶ್ ಕ್ಯಾಲಿಕಟ್, ಪಿಟೀಲು ವಾದಕರಾಗಿ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್, ಘಟಂ ವಾದಕರಾಗಿ ವಿದ್ವಾನ್ ಆಲುವ ರಾಜೇಶ್ ಕ್ಯಾಲಿಕಟ್ ಮೃದಂಗ, ಕ್ಶಿತೀಶ ರಾಮ ಕೆ ಎಸ್ ಸುಳ್ಯ ಪಿಟೀಲಿನಲ್ಲಿ ಸಹಕರಿಸಿದರು. ಅಭಿರಾಮ್ ಕೋಡಂಪಳ್ಳಿ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 119