tamanvi
ದೇಶಸ್ಥಳೀಯ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ! ತುರ್ತು ವಿಚಾರಣೆಯ ಮೊರೆ ಹೋದ ಕೇಜ್ರಿವಾಲ್ ಕಾನೂನು ತಂಡ!

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ.
ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡು ಬಂಧನ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ತತ್ ಕ್ಷಣವೇ ಈ ವಿಷಯದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮಗೊಳ್ಳುವುದರ ವಿರುದ್ಧ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಕೇಜ್ರಿವಾಲ್ ನಿವಾಸದ ಮುಂದೆ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸದ ಹೊರಗೆ ರಾಪಿಡ್ ಆಕ್ಷನ್ ಫೋರ್ಸ್ (RAF) ಕೂಡ ಹಾಜರಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 157