ಸ್ಥಳೀಯ

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಕಾವು: ಲಯನ್ಸ್ ಕ್ಲಬ್ ಎಂದಾಗ  ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೊಂದು ಸೇವಾ ಸಂಸ್ಥೆ ಅಷ್ಟೇ ಆಗಿ ಅಲ್ಲದೆ ಆಗಿದ್ದು ಎಲ್ಲರೂ ತಮ್ಮ ತಮ್ಮ ಸ್ವಾರ್ಥಗಳನ್ನು ತ್ಯಾಗ ಮಾಡಿದಾಗಲೇ ಇದಕ್ಕೊಂದು ಅರ್ಥ ಸಿಗುತ್ತದೆ ಎಂದು ಕುಮಾರ್ ಪೆರ್ನಾಜೆ ಹೇಳಿದರು.

maithri

ಕಾವು ಸಮುದಾಯ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಲಯನ್ಸ್ ಇದರ ಲಯನ್ಸ್ ಜಿಲ್ಲೆ 317d, 7ರ ವಲಯ ಎರಡರ ಲಯನ್ಸ್ ಕ್ಲಬ್ ಪುತ್ತೂರು ಕಾವು ಇದರ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮೋಹನ್ ಶೆಣೈ ಬಂಡಸಾಲೆ, ಕೆಎಸ್ಆರ್ಟಿಸಿ ನಿವೃತ್ತ ಟಿಸಿ ದಿನೇಶ್ ಗೌಡ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಲಾಯಿತು.

ಲಯನ್ಸ್ ಕ್ಲಬ್ ಪುತ್ತೂರು ಕಾವು ಅಧ್ಯಕ್ಷ ಕೆ ಇಬ್ರಾಹಿಂ ಹಾಜಿ ಅಧ್ಯಕ್ಷತೆ ವಹಿಸಿದ್ದರು.

ಲಯನ್ಸ್ ಕ್ಲಬ್ ಪುತ್ತೂರು ಕಾವು ಇದರ ಸ್ಥಾಪಕ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಸನ್ಮಾನಿಸಿದರು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಅವರು ಸನ್ಮಾನ ಪತ್ರವನ್ನು ವಾಚಿಸಿದರು.

ಪ್ರಾಂತ್ಯ ಅಧ್ಯಕ್ಷ ಎಂ ಆನಂದ ರೈ ಮತ್ತು ಪತ್ನಿ, ಲಯನ್ಸ್ ವಲಯ ಅಧ್ಯಕ್ಷ ಜಗನ್ನಾಥ ರೈ ಗುತ್ತು, ವಲಯ ರಾಯಭಾರಿ ರಮೇಶ್ ರೈ ಸಾಂತ್ಯ, ಕ್ಲಬ್ ಕೋಶಾಧಿಕಾರಿ ರಮೇಶ್ ಆಳ್ವ ಆಲೆಪ್ಪಾಡಿ ಗುತ್ತು, ಕ್ಲಬ್ ಕಾರ್ಯದರ್ಶಿ ದೇವಣ್ಣ ರೈ ಮುದರ್ಪಳ್ಳ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಮಂಡಳಿ ಪ್ರತಿಷ್ಠಾನ ಮಂಗಳೂರು ಘಟಕದ ಆಡಳಿತ ಮಂಡಳಿ ನಿರ್ದೇಶಕ ಜಯಪ್ರಕಾಶ್ ರೈ, ವಿಜಯ ಗ್ರಾಮೀಣ ಅಭಿವೃದ್ಧಿ ಮಂಡಳಿ ಕಾವು ಈಶ್ವರಮಂಗಲ ಘಟಕದ ಅಧ್ಯಕ್ಷ ಪಾವನ ರಾಮ ಸಹಕರಿಸಿದರು. ಸುರೇಖಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125