ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಹಡಿ ಮೇಲಿನಿಂದ ನವಿಲು ಕೆಳಗೆ ಬಿದ್ದಿದ್ದು, ಸ್ಥಳೀಯರ ಗಮನಕ್ಕೆ ಬಂದಿದೆ. ನಡೆದಾಡಲು ಅಥವಾ ಹಾರಾಡಲು ಅಸಾಧ್ಯವಾದ ನವಿಲು ಇರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಆರೈಕೆ ಮಾಡಿದ್ದು, ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಸ್ಥಳಕ್ಕೆ ಭೇಟಿ ನೀಡಿದರು.
























