tamanvi
ಸ್ಥಳೀಯ

ನಿರ್ಭಿತಿಯಿಂದ ಮತ ಚಲಾಯಿಸಿ: ಪೊಲೀಸರ ಅಭಯ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.

maithri

ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ಪಥಸಂಚಲನ ಸಾಗಿಬಂತು.

ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ದರ್ಬೆ ವೃತದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126