ಸ್ಥಳೀಯ

ನಟೋರಿಯಸ್ ಕಳ್ಳಿಯ ಬಂಧಿಸಿದ ಪುತ್ತೂರು ಪೊಲೀಸರು | ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳಿಯನ್ನು ಬಂಧಿಸಿದ್ದು, ಅಕೆಯಿಂದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.

akshaya college

ಪೆ. 12ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿದ್ದು, ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ಟರಿ (45) ಎಂಬಾಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಆಕೆಯ ಬಳಿಯಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107