ದೇಶಸ್ಥಳೀಯ

ಕಾಂಗ್ರೆಸ್ ಪಟ್ಟಿ: 46 ಅಭ್ಯರ್ಥಿಗಳಿಗೆ ಟಿಕೇಟ್ | ಮೋದಿ ವಿರುದ್ಧ ಮತ್ತೆ ಅಜಯ್ ರಾಜ್; ದ.ಕ. ಡಿಸಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಣಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರ ಎದುರು ಎರಡು ಬಾರಿ ಸೋಲು ಅನುಭವಿಸಿದ್ದರು.

SRK Ladders

ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ.

ಅಸ್ಸಾಂ 1, ಅಂಡಮಾನ್ ನಿಕೋಬಾರ್ 1, ಚತ್ತೀಸ್ ಗಡ್ 1, ಜಮ್ಮು ಕಾಶ್ಮೀರ 2, ಮಧ್ಯಪ್ರದೇಶ 12, ಮಹಾರಾಷ್ಟ್ರ 4, ಮಣಿಪುರ 2, ಮಿಜೋರಾಂ 1, ರಾಜಸ್ಥಾನ 3, ತಮಿಳುನಾಡು 7, ಉತ್ತರ ಪ್ರದೇಶ 9, ಉತ್ತರಾಖಂಡ 2, ಪಶ್ಚಿಮ ಬಂಗಾಳದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3