ಸ್ಥಳೀಯ

ಶಿಕ್ಷಣ ಕ್ಷೇತ್ರದ ಮಹತ್ವದ ಸಾಧನೆಗೆ ಜಯಂತ್ ನಡುಬೈಲುಗೆ ಗೌರವ ಸನ್ಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕನ್ನಡಪ್ರಭ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವು ಮರೋಳಿ ಸೂರ್ಯವುಡ್ಸ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿರುವ ಮಹತ್ವದ ಕೊಡುಗೆಯನ್ನು ಗುರುತಿಸಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

chennai-shopping
maithri

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಉದ್ಯೋಗಾಭಿಮುಖ ಶಿಕ್ಷಣ ನೀಡುವ ಸಂಕಲ್ಪದೊಂದಿಗೆ 2019ರಲ್ಲಿ ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಅಕ್ಷಯ ಕಾಲೇಜು ಸ್ಥಾಪನೆಗೆ ಮುಂದಾದ ಅವರು, ಪುತ್ತೂರಿನಲ್ಲಿ ಪ್ರಥಮ ಬಾರಿಗೆ ವಿಮಾನಯಾನ, ಕೃತಕ ಬುದ್ಧಿಮತ್ತೆ, ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ವಿಜ್ಞಾನ ವಿಭಾಗದ ಕೋರ್ಸ್‌ಗಳನ್ನು ಪರಿಚಯಿಸಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಿಕ್ಕು ತೋರಿದ್ದಾರೆ. ಇಂದಿಗೆ ಅಕ್ಷಯ ಶಿಕ್ಷಣ ಸಂಸ್ಥೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಉದ್ಯಮಿಯಾಗಿಯೂ ಗುರುತಿಸಿಕೊಂಡಿರುವ ಅವರು, ಕೇವಲ 100 ಕೋಳಿಗಳೊಂದಿಗೆ ಆರಂಭಿಸಿದ ಕೋಳಿ ಸಾಕಾಣಿಕೆ ಉದ್ಯಮವನ್ನು ಹಂತಹಂತವಾಗಿ ವಿಸ್ತರಿಸಿ ಲಕ್ಷಾಂತರ ಕೋಳಿಗಳ ಮಟ್ಟಕ್ಕೆ ಬೆಳೆಸಿದ್ದು, ಅನೇಕರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಜೊತೆಗೆ, ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ.
ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಗೌರವ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ , ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122