Gl
ಕರಾವಳಿಸ್ಥಳೀಯ

ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ ; ಯುವತಿ ಸಾವಿನ ಬೆನ್ನಲ್ಲೇ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನೂ ಸಾವು

GL

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾನೆ.

core technologies

ಮಂಗಳೂರಿನ ಪಚ್ಚನಾಡಿ ನಿವಾಸಿ ಯತೀಶ್‌ ದೇವಾಡಿಗ(29) ಸಾವನ್ನಪ್ಪಿದ ಯುವಕ.

ನಿನ್ನೆ ಸಂಜೆ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಇನ್ನೊಂದು ಬದಿಯ ರಸ್ತೆಗೆ ಬಿದ್ದಿತ್ತು. ಸವಾರ ಯತೀಶ್ ಮತ್ತು ಸಹ ಸವಾರೆ ಶ್ರೀನಿಧಿ(30) ರಸ್ತೆಗೆಸೆಯಲ್ಪಟ್ಟಿದ್ದರು.

ಗಂಭೀರ ಗಾಯಗೊಂಡಿದ್ದ ಪಡೀಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಶ್ರೀನಿಧಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿಯೇ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯತೀಶ್ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆದಿತ್ಯವಾರ ಶ್ರೀನಿಧಿ ಅವರು ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಂಜೆ ಯತೀಶ್ ಜೊತೆ ಬೈಕಿನಲ್ಲಿ ಮಂಗಳೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ತೋಕೂರಿನ‌ ತವರು ಮನೆಯಲ್ಲೇ ಉಳಿದಿದ್ದ ಶ್ರೀನಿಧಿಗೆ ಇಬ್ಬರು ಪುಟ್ಟ ಮಕ್ಕಳಿದ್ದು ಮನೆ ಮಗಳ ಸಾವಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಯತೀಶ್ ದೇವಾಡಿಗನೂ ಪೋಷಕರಿಗೆ ಏಕೈಕ ಪುತ್ರನಾಗಿದ್ದು ಆತನ ಅಕಾಲಿಕ ಅಗಲಿಕೆಯಿಂದ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 154