tamanvi
ಸ್ಥಳೀಯ

ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ ಹರೀ‍ಶ್ ನಾಯಕ್ ಬಳಕ್ಕ ಅವರಿಗೆ ಬಳಕ್ಕ ಮರಿಕೆಯ ಶ್ರೀ ಭ್ರಾಮರಿ ಗೃಹಪ್ರವೇಶದ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು.

ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ, ಜನಮನ್ನಣೆ ಗಳಿಸಿರುವ ಹಿನ್ನೆಲೆಯಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗ್ರಾಮಾಂತರ ಬಿಜೆಪಿ ಮಂಡಲ ಅದ್ಯಕ್ಷ ದಯಾನಂದ ಉಜಿರೆಮಾರು, ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಬೂಡಿಯಾರ್ ರಾಧಾಕೃಷ್ಣ ರೈ, ಹರೀಶ್ ಬಿಜತ್ರೆ, ಪ್ರಮುಖರಾದ ಜಯಂತ ಶೆಟ್ಟಿ ಕಂಬಳತ್ತಡ್ಡ, ವಿಜಯ ಬಿ.ಎಸ್., ಗಣೇಶ್ ರೈ ಮೂಲೆ, ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸದಸ್ಯ ಪ್ರಜ್ವಲ್ ರೈ ತೊಟ್ಲ, ಆರ್ಯಾಪು ಗ್ರಾಪಂ ಪಿಡಿಓ ನಾಗೇಶ್, ಬಿಜೆಪಿ 114ನೇ ಬೂತ್ ಅಧ್ಯಕ್ಷ ಶಶಿಧರ್ ಗೌಡ ಮರಿಕೆ, ಕಾರ್ಯದರ್ಶಿ ರವಿಕಿರಣ್ ಭಟ್ ಬಲ್ಲೇರಿ ಮೊದಲಾದವರು ಉಪಸ್ಥಿತರಿದ್ದರು.

ಮನೆಯವರಾದ ಶೇಷಪ್ಪ ಕುಲಾಲ್, ಕಮಲಾ ಶೇಷಪ್ಪ ಕುಲಾಲ್, ರಾಮಚಂದ್ರ ಕುಲಾಲ್ ಬಳಕ್ಕ ಅತಿಥಿಗಳನ್ನು ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133