Gl jewellers
ಸ್ಥಳೀಯ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ |ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.

Akshaya College

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.

ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ:
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.
ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.

ಒಮ್ಮತದ ಅಭ್ಯರ್ಥಿ:
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.

ಗೆಲ್ಲುವ ಅಭ್ಯರ್ಥಿ:
ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.

ಗೆಲುವಿಗಾಗಿ ಹೋರಾಟ:
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು…