ಸ್ಥಳೀಯ

ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬೆಳ್ತಂಗಡಿ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಶೇಖರ್ ಬಂಗೇರ ಹೇರಾಜೆ (65) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಯುವತಿ ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಕೂಟರ್ ಸವಾರೆ ಬೆಳ್ತಂಗಡಿ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

chennai-shopping
maithri

ಮೃತ ದುರ್ದೈವಿ ಶೇಖರ್ ಬಂಗೇರ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿಯಾಗಿದ್ದು, ಮುಗ್ಗ ಗುತ್ತು ಮನೆತನ ಟ್ರಸ್ಟ್ ಕೋಶಾಧಿಕಾರಿ, ಲಾಯಿಲ ರಾಘವೇಂದ್ರ ಮಠದ ಕೋಶಾಧಿಕಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123