tamanvi
ಸ್ಥಳೀಯ

ಪುತ್ತೂರು: ಮತದಾನ ಜಾಗೃತಿ ಕಾರ್ಯಕ್ರಮ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚುನಾವಣೆ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖಾಧಿಕಾರಿಗಳ ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ಹೇಳಿದರು.

ಅವರು ಮಾ.28 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹನಮರೆಡ್ಡಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ತಾ.ಪಂ. ಸಹಾಯಕ ನಿರ್ದೇಶಕರು (ಗ್ರಾ‌.ಉ.) ಶೈಲಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 132