ಸ್ಥಳೀಯ

37.65 ಕೋಟಿ ರೂ. ವೆಚ್ಚದ ಶ್ರಮಿಕ ವಸತಿ ಶಾಲೆಗೆ ಕುರಿಯದಲ್ಲಿ ಶಿಲಾನ್ಯಾಸ | ತಾಲೂಕು ಕೇಂದ್ರಕ್ಕೆ ಮಂಜೂರಾಗಿರುವುದು ಪುತ್ತೂರಿಗೆ ಮಾತ್ರ: ಶಾಸಕ ಅಶೋಕ್ ರೈ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯದ ಪ್ರತಿ ಜಿಲ್ಲೆಗಳಿಗೂಂದು ಶ್ರಮಿಕ ಶಾಲೆ ಮಂಜೂರು ಮಾಡುತ್ತಿದೆ. ಮೂಡಬಿದರೆಯವರು ಬಹಳಷ್ಟು ಪ್ರಯತ್ನಪಟ್ಟಿದ್ದರು. ಆದರೆ ಪುತ್ತೂರಿನಲ್ಲಿ ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಜಾಗ ಮಂಜೂರುಗೊಳಿಸಿರುವುದರಿಂದ ಪುತ್ತೂರಿಗೆ ಶ್ರಮಿಕ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾ ಕೇಂದ್ರದಲ್ಲಿ ಮಾತ್ರವೇ ಮಂಜೂರುಗೊಳಿಸಲು ಅವಕಾಶವಿದ್ದು ರಾಜ್ಯದಲ್ಲಿ ತಾಲೂಕು ಕೇಂದ್ರಕ್ಕೆ ಮಂಜೂರಾಗಿರುವುದು ಪುತ್ತೂರಿಗೆ ಮಾತ್ರ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

chennai-shopping
maithri

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ಕುರಿಯದಲ್ಲಿ ರೂ. 37.65 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರಮಿಕ ವಸತಿ ಶಾಲಾ ಕಟ್ಟಡಕ್ಕೆ ಎ. 20ರಂದು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಬಡ ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆತು ಅವರೂ ಸಮಾಜದಲ್ಲಿ ಮುಂದುವರಿಯಬೇಕು ಎಂಬ ಉದ್ದೇಶದಿಂದ ಕಾರ್ಮಿಕರ ಶ್ರಮಿಕ ವಸತಿ ಶಾಲೆ ಮಂಜೂರುಗೊಳಿಸಲಾಗಿದೆ. ಈ ಶಾಲೆಯಲ್ಲಿ ಕಾರ್ಮಿಕರ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರ ಮಕ್ಕಳಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶವಿದೆ. ಹೀಗಾಗಿ ಕಾರ್ಮಿಕರಾಗಿರುವವರು ಕಾರ್ಮಿಕರ ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು. ಬಹುತೇಕವಾಗಿ 6-12 ತರಗತಿ ತನಕದ ಶಾಲೆಗಳು ಗರಿಷ್ಠ 10 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಮಾತ್ರ ಇರುತ್ತದೆ. ಆದರೆ ಶ್ರಮಿಕ ಶಾಲೆ 71 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳಿದೆ. ಶ್ರಮಿಕ ಶಾಲಾ ಸೌಲಭ್ಯದ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಶ್ರಮಿಕ ಶಾಲೆಗೆ ದಾಖಲಾತಿ ಮಾಡಿಸುವಂತೆ ಮಾಡಬೇಕು ಎಂದು ಹೇಳಿದರು.

18 ತಿಂಗಳಲ್ಲಿ ಲೋಕಾರ್ಪಣೆ

ರೂ. 37.65 ಕೋಟಿ ಶ್ರಮಿಕ ಶಾಲೆಗೆ ಶಿಲಾನ್ಯಾಸಗೊಂಡಿದೆ. ಈ ಶಾಲಾ ಕಟ್ಟಡವು ಮುಂದಿನ 18 ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಚುನಾವಣೆಗೆ ಮೊದಲು ಮಕ್ಕಳು ದಾಖಲಾತಿ ನಡೆಯಲಿದೆ. ಶ್ರಮಿಕ ಶಾಲೆಯಲ್ಲಿ ಎಲ್ಲಾ ವಿಷಯವಾರು ಶಿಕ್ಷಕರಿರುತ್ತಾರೆ. ಎಲ್ಲಾ ಶಿಕ್ಷಕರು ವಸತಿಯಲ್ಲಿರಲಿದ್ದಾರೆ. ಬಾಲಕ-ಬಾಲಕಿಯ ವಸತಿ ನಿಲಯ, ಶಿಕ್ಷಕರ ವಸತಿ ನಿಲಯ ಸೇರಿದಂತೆ ಒಟ್ಟು ಎಳೂವರೆ ಎಕರೆಯಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಶ್ರಮಿಕ ಶಾಲೆಯ ಪುತ್ತೂರಿನ ಅಭಿವೃದ್ಧಿಗೆ ಇನ್ನೊಂದು ಮುಕುಟ: ಡಾ.ರಾಜಾರಾಮ ಕೆ.ಬಿ.

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ. ಮಾತನಾಡಿ, ಪುತ್ತೂರು ಅಭಿವೃದ್ಧಿ ಪರ್ವದಲ್ಲಿ ಮುನ್ನಡೆಯುತ್ತಿದೆ. ಶಾಸಕರ ಅಭಿವೃದ್ಧಿ ಕಾರ್ಯಗಳಿಂದ ಪುತ್ತೂರು ರಾಜ್ಯದಲ್ಲಿ ಗುರುತಿಸಲ್ಪಡುವ ಕ್ಷೇತ್ರವಾಗಿದೆ. ಕಾರ್ಮಿಕರ ಮಕ್ಕಳಿಗಾಗಿರುವ ಶ್ರಮಿಕ ಶಾಲೆಯು ಪುತ್ತೂರಿನ ಅಭಿವೃದ್ಧಿಗೆ ಇನ್ನೊಂದು ಮುಕುಟವಾಗಿದೆ. ಇದು ಬಡ ವಿದ್ಯಾರ್ಥಿಗಳಿಗೆ ಆಸರೆ ಅಗಲಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉದ್ಯಮಿ ಶಿವರಾಮ ಆಳ್ವ ಬಳ್ಳಮಜಲು, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಅಮಳ ರಾಮಚಂದ್ರ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ಕುರಿಯ ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ ನೇಮಾಕ್ಷ ಸುವರ್ಣ ಸ್ವಾಗತಿಸಿ, ವಂದಿಸಿದರು. ಪಕ್ಷದ ಪ್ರಮುಖರಾದ ರಮೇಶ್ ರೈ ಡಿಂಬ್ರಿ, ಫಾರೂಕ್ ಬಾಯಬೆ, ಪೂರ್ಣೇಶ್ ಭಂಡಾರಿ, ಯಾಕೂಬ್ ಯಾನೆ ಸುಲೈಮಾನ್, ವಿಶ್ವಜಿತ್ ಅಮ್ಮುಂಜ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸತೀಶ್ ರೈ ನಿಡ್ಪಳ್ಳಿ, ಸದಾಶಿವ ರೈ ಗುಮ್ಮಟೆಗದ್ದೆ, ಗಿರೀಶ್ ರೈ ಮೂಲೆ, ಗೋಪಾಲಕೃಷ್ಣ ಗೌಡ, ಜಯಪ್ರಕಾಶ್ ರೈ, ಸೂಫಿ ಮೊದಲಾದವರು ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು.

ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಲ್ಮಾ, ಪುತ್ತೂರಿನ ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ಕರ್ನಾಟಕ ರಾಜ್ಯ ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿದ್ದಪ್ಪ, ಗುತ್ತಿಗೆದಾರ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123