ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ.
ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್ ಜಿಲ್ಲಾ ಸಮಿತಿ ಆದೇಶಿಸಿದೆ.
ತಕ್ಷಣದಿಂದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸ್ಥಳೀಯ ಮುಖಂಡರು, ಕಾರ್ಯಕರ್ತರ ಸಹಕಾರದೊಂದಿಗೆ ಸಭೆ ನಡೆಸಿ, ಪ್ರಚಾರ ಕಾರ್ಯ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.