ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಮುಂದೆ ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿವರೆಗೂ ಅಥವಾ ಚುನಾವಣಾ ಆಯೋಗದ ನೊಟೀಸ್ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡರು.
ಖಾಸಗಿ ಕಾರ್ಯಕ್ರಮಗಳಾದ ಮದುವೆ ಅಥವಾ ಇನ್ನಾವುದೇ ಸಮಾರಂಭಗಳಿಗೆ ಅನುಮತಿ ಪಡೆದುಕೊಳ್ಳುವ ಅಗತ್ಯವಿಲ್ಲ. ಆದರೆ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾಹಿತಿ ನೀಡಬೇಕು. ಸಮಾರಂಭದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಎಂಬುದನ್ನು ದೃಢಪಡಿಸಬೇಕು. ಇನ್ನೂ ಇತರ ಅನುಮತಿಗಳಾದ ಮೈಕ್ ಪರ್ಮೀಷನ್, ಪೊಲೀಸ್ ಮಾಹಿತಿಯನ್ನು ಮೊದಲಿನಂತೆ ಪಾಲಿಸಬೇಕಾಗಿದೆ ಎಂದರು.
ತಹಸೀಲ್ದಾರ್ ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.