Gl
ಧಾರ್ಮಿಕಸ್ಥಳೀಯ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.

Pashupathi

ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್ ರಾವ್ ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ ಸಹಕರಿಸಿದರು.

akshaya college

ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಕೌರವ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ ), ಸತೀಶ್ ಆಚಾರ್ಯ ಮಾಣಿ (ಶಕುನಿ), ಶ್ರುತಿ ವಿಸ್ಮಿತ (ವಿದುರ), ಶ್ರೀಧರ ಎಸ್.ಪಿ ಮಂಗಳೂರು (ಧರ್ಮರಾಯ), ದಿವಾಕರ ಆಚಾರ್ಯ ಗೇರುಕಟ್ಟೆ (ಧೃತರಾಷ್ಟ್ರ ಮತ್ತು ಭೀಮ) ಭಾಗವಹಿಸಿದ್ದರು.ಗಣೇಶ್ ಆಚಾರ್ಯ. ಕೆ ಬೆಂಗಳೂರು ಕಾರ್ಯಕ್ರಮದ ಪ್ರಾಯೋಜಕರಾಗಿ ಸಹಕರಿಸಿದರು.ನುಡಿನಮನ: ಇತ್ತೀಚೆಗೆ ನಿಧನರಾದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ವೇಷಧಾರಿ ಗಂಗಾಧರ ಪುತ್ತೂರು ಇವರಿಗೆ ಸತೀಶ್ ಆಚಾರ್ಯ ಮಾಣಿ ಮತ್ತು ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ನುಡಿ ನಮನ ಸಲ್ಲಿಸಿದರು.ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ, ಜಯರಾಮ ಬಲ್ಯ, ದಿವಾಕರ ಆಚಾರ್ಯ ನೇರೆಂಕಿ ಮತ್ತು ಸಂಘದ ಕಲಾವಿದರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

1 of 109