tamanvi
ಸ್ಥಳೀಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಭೆಯಲ್ಲಿ ತಂಬಾಕು ವಿರೋಧಿ ದಿನ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಲಿಂಗೇಶ್ವರ ಒಕ್ಕೂಟದ ತ್ರೈಮಾಸಿಕ ಸಭೆ ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಇದೇ ಸಂದರ್ಭ ಆಚರಿಸಿದ ತಂಬಾಕು ವಿರೋಧಿ ದಿನದ ಬಗ್ಗೆ ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ ಮಾತನಾಡಿ, ತಂಬಾಕು ಸೇವನೆಯು ದೇಹಕ್ಕೆ ತುಂಬಾ ಹಾನಿಕಾರ. ಶ್ವಾಸಕೋಶದ ಕ್ಯಾನ್ಸರ್ ದವಡೆ ಕ್ಯಾನ್ಸರ್ ಮುಂತಾದ ಕಾಯಿಲೆ ಬರುತ್ತದೆ ಹಾಗೂ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಅಲ್ಲದೇ ಆರೋಗ್ಯ ಹದಗೆಟ್ಟರೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ ಹಾಗೂ ಮನೆಯ ನೆಮ್ಮದಿ ಹಾಳಾಗುತ್ತದೆ. ಆದ್ದರಿಂದ ತಂಬಾಕು  ಮುಕ್ತ ಬದುಕು ನಮ್ಮದಾಗಲಿ ಎಂದು ಹೇಳಿದರು.

ವಲಯ ಮೇಲ್ವಿಚಾರಕ ಜೀವನ್ ಅವರು ಸಿ.ಎಸ್.ಸಿ. ಕೇಂದ್ರಕ್ಕೆ ಸಂಬಂಧಪಟ್ಟ ವಿಷಯದ ಬಗ್ಗೆ ಮತ್ತು ಯೋಜನೆಗೆ ಸಂಬಂಧಪಟ್ಟ ವಿಷಯವನ್ನು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷೆ ಸ್ವರ್ಣಲತಾ ಹೆಗಡೆ ಅವರು, ಒಕ್ಕೂಟವನ್ನು ಶಿಸ್ತಿನಿಂದ ನಡೆಸುತ್ತಾ ಹೋಗಬೇಕು ಎಂದು ಶುಭ ಹಾರೈಸಿದರು.

ಒಕ್ಕೂಟದ ನೂತನ ಅಧ್ಯಕ್ಷ ಕೆ ಜಯರಾಮ್ ಕುಲಾಲ್, ಜನಜಾಗೃತಿ ವಲಯದ ಉಪಾಧ್ಯಕ್ಷ ಗಣೇಶ ಬೆದ್ರಾಳ, ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷ ಪುಂಡರಿಕ, ಜೊತೆ ಕಾರ್ಯದರ್ಶಿ ಸೀತಾರಾಮ್ ಆಚಾರ್ಯ, ಕೋಶಾಧಿಕಾರಿ ಶ್ರೀನಿವಾಸ, ವಿ.ಎಲ್.ಈ. ವಿಮಲ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ನಳಿನಾಕ್ಷಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವನಿತಾ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 136