ಸ್ಥಳೀಯ

ಸಂಕಷ್ಟದಲ್ಲಿದ್ದ ಮಹಿಳೆಗೆ ಪುತ್ತೂರು ಬಿಲ್ಲವ ಬ್ರಿಗೇಡ್’ನಿಂದ ಧನಸಹಾಯ

ಈ ಸುದ್ದಿಯನ್ನು ಶೇರ್ ಮಾಡಿ

ದಾರಂದಕುಕ್ಕು ನಿವಾಸಿ ಜಯಂತಿ (ದಿ.  ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಲಾಯಿತು.

maithri

ಕಳೆದ ತಿಂಗಳು ಪತಿಯನ್ನು ಕಳೆದುಕೊಂಡಿದ್ದ ಜಯಂತಿ ಅವರು ಇತ್ತೀಚೆಗೆ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲು ಮುರಿದು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರ್ಥಿಕ ಸಂಕಷ್ಟವನ್ನು ಅರಿತು ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಹಾಗೂ ಸದಸ್ಯರು ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಪುತ್ತೂರು ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಸಮಾಜದ ಬಡ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮುಂದೆಯೂ ಇದೇ ರೀತಿಯ ನೆರವು ನೀಡುವ ಕಾರ್ಯವನ್ನು ಬಿಲ್ಲವ ಬ್ರಿಗೇಡ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.

ಧನಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಲ್ಲವ ಬ್ರಿಗೇಡ್ ಪುತ್ತೂರಿನ ಪ್ರಧಾನ ಕಾರ್ಯದರ್ಶಿ ರಂಜಿತ್ ಸುವರ್ಣ, ಉಪಾಧ್ಯಕ್ಷ ಅಣ್ಣಿ ಪೂಜಾರಿ, ಕೋಶಾಧಿಕಾರಿ ಚಂದ್ರಶೇಖರ ಕಲ್ಲಗುಡ್ಡೆ, ಸದಸ್ಯ ವಿನಯ ಸುವರ್ಣ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125