Gl harusha
ರಾಜ್ಯ ವಾರ್ತೆಸ್ಥಳೀಯ

ಕೊಡಗು: ಶಾಲೆಗೆ ಶೇ. 100 ರಿಸಲ್ಟ್ ಕೊಡಿಸಿದ್ದ ವಿದ್ಯಾರ್ಥಿನಿ ಭೀಕರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ.

srk ladders
Pashupathi

ಆ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸೂರ್ಲಬ್ಬಿ ಶಾಲೆಯ 10ನೇ ತರಗತಿಯ ಏಕೈಕ ವಿದ್ಯಾರ್ಥಿಯಾಗಿದ್ದ ಯು.ಎಸ್.ಮೀನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಳು. ಇದರಿಂದ ಆಕೆ ಓದಿದ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಂತಾಗಿತ್ತು. ಪರೀಕ್ಷೆಯಲ್ಲಿ ಪಾಸ್ ಆಗಿದ್ದರಿಂದ ಮೀನ ಮಾತ್ರವಲ್ಲದೆ ಇಡೀ ಗ್ರಾಮವೇ ಖುಷಿಯಲ್ಲಿತ್ತು. ಅಷ್ಟರಲ್ಲೇ ರಾತ್ರಿ ಅವಳನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ದುಷ್ಕರ್ಮಿಗಳು ಆಕೆಯ ತಲೆಯನ್ನು ಕತ್ತರಿಸಿ ದೇಹವನ್ನು ಮನೆ ಬಳಿ ಎಸೆದು ಹೋಗಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts