tamanvi
ಸ್ಥಳೀಯ

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು ಕಟ್ಟಿಕೊಂಡಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯು ದೇಶಕ್ಕೆ ಮಾದರಿಯಾಗಿದೆ. ಸರ್ಕಾರವು ಪಕ್ಷ ಬೇಧವಿಲ್ಲದೆ ಎಲ್ಲರಿಗೂ ಯೋಜನೆಯನ್ನು ಒದಗಿಸುವ ಮೂಲಕ ಅವರ ಬದುಕನ್ನು ಸಾಕಾರಗೊಳಿಸಿದೆ ಎಂದು ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಹೇಳಿದರು.

maithri

ಅವರು ಗುರುವಾರ ದ.ಕ. ಜಿಲ್ಲಾ ಪಂಚಾಯತ್, ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು, ತಾಲೂಕು ಪಂಚಾಯತ್ ಪುತ್ತೂರು ಹಾಗೂ ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇವುಗಳ ಸಹಯೋಗದಲ್ಲಿ ಪುತ್ತೂರಿನ ಶಿಶು ಅಭಿವೃದ್ಧಿ ಯೋಜನೆ ಕಚೇರಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ 3 ವರ್ಷಗಳು ತುಂಬಿದ ಪ್ರಯುಕ್ತ ನಡೆದ `ಗೃಹಲಕ್ಷ್ಮೀ ಸಂಭ್ರಮಾಚರಣೆ’  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಯನ್ನು ತಳಮಟ್ಟದಲ್ಲಿ ಯಶಸ್ವಿಗೊಳಿಸಿದ ಕೀರ್ತಿಯು ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಸಲ್ಲುತ್ತದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತಿಯೊಂದು ಕುಟುಂಬಕ್ಕೆ ಈ ತನಕ ಒಟ್ಟು ರೂ. 62 ಸಾವಿರ ಖಾತೆಗೆ ಜಮೆಯಾಗಿದೆ. ಇನ್ನು 5 ಕಂತುಗಳು ಬರಲು ಬಾಕಿಯಾಗಿದ್ದು ಶೀಘ್ರವೇ ಈ ಹಣವು ಖಾತೆಗೆ ಜಮೆಯಾಗಲಿದೆ. ಈ ಯೋಜನೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ರೂ. 325 ಕೋಟಿ ಹಣ ಬಿಡುಗಡೆಯಾಗಿದ್ದು, ಪುತ್ತೂರು ತಾಲೂಕಿನ ರೂ. 203 ಕೋಟಿ ಬಿಡುಗಡೆಯಾಗಿದೆ. ಭಾರತದಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಖಾತೆಗೆ ಹಣ ಹಾಕಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗ್ಯಾರಂಟಿ ಯೋಜನೆಯ ಬಗ್ಗೆ ದೇಶವೇ ಗಮನಿಸುವಂತಾಗಿದೆ. ಗ್ರಾಮೀಣ ಮತ್ತು ನಗರವೆಂಬ ವ್ಯತ್ಯಾಸವಿಲ್ಲದೆ ಎಲ್ಲಾ ಕುಟುಂಬಗಳಿಗೂ ಗೃಹಲಕ್ಷ್ಮೀ ಯೋಜನೆಯಲ್ಲಿ ತಲಾ ರೂ. 2 ಸಾವಿರ ನೀಡಿ ಮಹಿಳೆಯರು ಯಾರನ್ನೂ ಅವಲಂಬಿಸಿದೆ ಬದುಕಲು ಸಹಕಾರ ನೀಡಿದೆ. ಕೆಲವರು ಸ್ವಯಂ ಮಾಡುತ್ತಿರುವ ತಪ್ಪುಗಳಿಂದಾಗಿ ಕೆಲವರ ಖಾತೆಗೆ ಹಣ ಬರದಂತೆ ಆಗಿದೆ. ಈ ಬಗ್ಗೆ ಇಲಾಖೆಯು ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಬಬಿತಾ, ನಾಗಲಕ್ಷ್ಮೀ, ಭಾಗ್ಯ ಎಂ, ರಮ್ಲತ್ ಪಂಜಳ, ಜೈನಾಬಿ ಕಲ್ಲೇರಿ, ಜಯಂತಿ ಬಾಯಂಬಾಡಿ ಅನಿಸಿಕೆ ವ್ಯಕ್ತ ಪಡಿಸಿ ಸರ್ಕಾರದ ಯೋಜನೆಗೆ ಅಭಿನಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ಬು ನವಗ್ರಾಮ, ವಿಶ್ವಜಿತ್ ಅಮ್ಮುಂಜೆ, ಬಬಿತಾ, ತಾರಾನಾಥ, ಸೇಸಪ್ಪ ನೆಕ್ಕಿಲು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಕಚೇರಿ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಕಾಳೆ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125