Gl harusha
ಕರಾವಳಿಸ್ಥಳೀಯ

ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

srk ladders
Pashupathi
Muliya

ಪಿಲ್ಯ ನಿವಾಸಿ ನೀತಾ (34) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ.

ನೀತಾ ಅವರು ಮೇ 11 ರಂದು ಮನೆಗೆ ಬಾಗಿಲು ಹಾಕಿ ತವರು ಮನೆಗೆ ಹೋಗಿದ್ದು, ಮೇ 13 ರ ಮಧ್ಯಾಹ್ನ ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯವರು ನೀಡಿ ಮಾಹಿತಿಯಂತೆ ಮನೆಗೆ ಬಂದು ಪರಿಶೀಲನೆ ನಡೆಸಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಗೋಡ್ರೆಜ್ ಬೀಗ ಮುರಿದು ಅದರಲ್ಲಿದ್ದ 1.98 ಲಕ್ಷ ರೂಪಾಯಿ ಮೌಲ್ಯದ 33 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ರೂಪಾಯಿ ನಗದು ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಕಳವಾಗಿರುವ ನಗ-ನಗದಿನ ಒಟ್ಟು ಮೌಲ್ಯ 2.38 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2024 ಕಲಂ : 454,457,380 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ