ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಭಾನವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿದ್ದ ಸಂತ ಅಲೋಸಿಯಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ಸಂವಹನ ಕೌಶಲಗಳನ್ನು ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಇನ್ನೋರ್ವ ಮುಖ್ಯ ಅತಿಥಿ ಪ್ರಶಾಂತ್ ಬೆದ್ರಾಳ ಮಾತನಾಡಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಪ್ರಶ್ನೆ ಮಾಡುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ವಿಶ್ವಕರ್ಮ ಯುವ ಸಮಾಜದ ಚಟುವಟಿಕೆಗಳ ಬಗ್ಗೆ ಮಾತನಾಡಿ, ಸಮಾಜ ಬಾಂಧವರ ಸಹಕಾರವನ್ನು ಕೋರಿದರು.
ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾದ ಶ್ರೀಧರ ಆಚಾರ್ಯ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಸಲಹಾ ಸಮಿತಿ ಸದಸ್ಯರಾದ ಭುಜಂಗ ಆಚಾರ್ಯ ಉಪಸ್ಥಿತರಿದ್ದರು.
ಜೊತೆ ಕಾರ್ಯದರ್ಶಿ ಪ್ರವೀಣ್ ಉಕ್ಕುಡ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿದರು. 75ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ನೀಡಲಾಯಿತು.
ಗೋಪಾಲ ಆಚಾರ್ಯ ಪ್ರಾರ್ಥಿಸಿದರು. ವಸಂತ್ ಬೊಳ್ವಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ ಆಚಾರ್ಯ ಕಾಣಿಯೂರು, ಗಂಗಾಧರ ಆಚಾರ್ಯ ಮತ್ತು ಗಣೇಶ ಆಚಾರ್ಯ ಬೆದ್ರಾಳ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ದಕ್ಷಿತ್ ಆಚಾರ್ಯ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ವಿಶ್ವಕರ್ಮ ಯುವ ಸಮಾಜದ ಕಾರ್ಯದರ್ಶಿ ಹರೀಶ್ ಕೊಡಪಟ್ಯ ವಂದಿಸಿ, ಬಿ.ವಿ. ಕಿಶನ್ ಕಾರ್ಯಕ್ರಮ ನಿರೂಪಿಸಿದರು.
ಫೊಟೋ: ಪದ್ಮ ಸ್ಟುಡಿಯೋ
























