tamanvi
ಸ್ಥಳೀಯ

ನಿಯಂತ್ರಣ ತಪ್ಪಿದ ಲಾರಿ ಅಂಗಡಿಗೆ ನುಗ್ಗಿ ಅವಾಂತರ; ಆಕ್ಟಿವಾ ಜಖಂ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಯೊಂದರ ಮುಂದೆ ನಿಲ್ಲಿಸಲಾಗಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ತಾಲೂಕಿನ ಪಡೀಲ್‌ನಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ವೇಳೆ ಲಾರಿಯು ಏಕಾಏಕಿ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯ ಪರಿಣಾಮ ಅಂಗಡಿಯ ಮುಂಭಾಗ ಹಾಗೂ ನಿಲ್ಲಿಸಲಾಗಿದ್ದ ಆಕ್ಟಿವಾಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135