tamanvi
ಶಿಕ್ಷಣಸ್ಥಳೀಯ

ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ, ಆ.6: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ (INSPA – Indian School Psychology Association) ವತಿಯಿಂದ ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿದೆ.

ಚೆನ್ನೈಯ ಎನ್.ಕೆ.ಟಿ. ನ್ಯಾಷನಲ್ ಮಹಿಳಾ ಕಾಲೇಜಿನಲ್ಲಿ ಬುಧವಾರ ನಡೆದ 16ನೇ ‘ಇನ್‌ಸ್ಪಾ’ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್‌ಡಿಎಂ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್ ಹಾಗೂ ಉಪನ್ಯಾಸಕಿ ಅಶ್ವಿನಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಮನೋವಿಜ್ಞಾನ ವಿಭಾಗದ ಶೈಕ್ಷಣಿಕ ಗುಣಮಟ್ಟ, ವಿದ್ಯಾರ್ಥಿಗಳಿಗೆ ನೀಡುತ್ತಿರುವ ತರಬೇತಿ, ಸಂಶೋಧನಾ ಸಾಧನೆ, ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಾಧನೆಗೆ ಎಸ್‌ಡಿಎಂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಡೀನ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್, ಉಪನ್ಯಾಸಕಿ ಅಶ್ವಿನಿ ಹಾಗೂ ವಿಭಾಗದ ಎಲ್ಲಾ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

1 of 164