tamanvi
ಸ್ಥಳೀಯ

ವಿಮ್ ಪುತ್ತೂರು ಕ್ಷೇತ್ರಕ್ಕೆ ಹೊಸ ನಾಯಕತ್ವ: ಝುಹರಾ ಬನ್ನೂರು ಅಧ್ಯಕ್ಷೆಯಾಗಿ ಆಯ್ಕೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಎಂ.ಡಿ.ಎಸ್. ಪಡೀಲ್ ಸಭಾಂಗಣದಲ್ಲಿ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷೆಯಾಗಿ ಝುಹರಾ ಬನ್ನೂರು, ಉಪಾಧ್ಯಕ್ಷೆಯಾಗಿ ಶಹನಾಝ್, ಕಾರ್ಯದರ್ಶಿಯಾಗಿ ಸಾಬಿರಾ ಉಸ್ಮಾನ್, ಜೊತೆ ಕಾರ್ಯದರ್ಶಿಯಾಗಿ ರಶೀದಾ ರಫೀಕ್, ಕೋಶಾಧಿಕಾರಿಯಾಗಿ ಇಫ್ತಾನ್ ಆಯ್ಕೆಯಾದರು. ಸಮಿತಿ ಸದಸ್ಯೆಯರಾಗಿ ಆಶಿಫಾ, ಅಸ್ಮಾ ಸಾಜಿದಾ ಹಾಗೂ ಸಾಬಿರಾ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝಹನಾ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಗೂಡಿನಬಳಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಅವರು ನಾಯಕತ್ವ ವಿಷಯದ ಕುರಿತು ತರಬೇತಿ ನೀಡಿದರು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ಸಮಾರೋಪ ಭಾಷಣ ಮಾಡಿದರು. ಜಿಲ್ಲಾ ಸಮಿತಿ ಸದಸ್ಯೆ ಮೈಬುನ್ನಿಸಾ ಕಾರ್ಯಕ್ರಮವನ್ನು ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 126