ಪುತ್ತೂರಿನಲ್ಲಿ ಇಂದು (ಆಗಸ್ಟ್ 7) ನಡೆಯಲಿರುವ ಬೃಹತ್ ‘ತಿರಂಗ ಯಾತ್ರೆ’ಗೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಬೃಹತ್ ಯಾತ್ರೆ ಮಧ್ಯಾಹ್ನ 3 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡಲಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಪ್ರಮುಖ ನಾಯಕರು ಈ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ರಾಷ್ಟ್ರಧ್ವಜ ಹಿಡಿದು 5 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವರು. ಕಿಲ್ಲೆ ಮೈದಾನಕ್ಕೆ ಯಾತ್ರೆ ಆಗಮಿಸಿ, ಕಾರ್ಯಕ್ರಮದ ಸಂದೇಶವನ್ನು ಅತಿಥಿಗಳು ನೀಡಲಿದ್ದಾರೆ.























