Gl harusha
ರಾಜ್ಯ ವಾರ್ತೆಸ್ಥಳೀಯ

ಪ್ರಜ್ವಲ್‌ ರೇವಣ್ಣ ಇಂದೇ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ಲಭ್ಯವಾಗಿದೆ.

srk ladders
Pashupathi
Muliya

ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts