tamanvi
ಸ್ಥಳೀಯ

ಬೆಳ್ಳಾರೆ: ತಾಯಿ-ಮಗು ನಾಪತ್ತೆ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಾರೆ:  ಕೊಳ್ತಿಗೆ ಗ್ರಾಮದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗಳು ನಾಪತ್ತೆಯಾಗಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

maithri

ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮ್ಯಾ ಎ.ವಿ. (29) ಹಾಗೂ ಅವರ ಪುತ್ರಿ ಪ್ರಾಪ್ತಿ (3) ನಾಪತ್ತೆಯಾಗಿರುವವರು. ಇವರು ಆಗಸ್ಟ್ 10ರಿಂದ ಮನೆಯಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಾಪತ್ತೆಯಾಗಿರುವ ತಾಯಿ-ಮಗುವಿನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ರಮ್ಯಾ ಹಾಗೂ ಪ್ರಾಪ್ತಿ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕೂಡಲೇ ಬೆಳ್ಳಾರೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 128