ಸ್ಥಳೀಯ

ಸುಬ್ರಹ್ಮಣ್ಯ: ಭಾರೀ ಮಳೆಗೆ ಬೃಹತ್ ಮರ ಉರುಳಿ ಬಿದ್ದು ಮಹಿಳೆ ಮೃತ್ಯು

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿ.

SRK Ladders

ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರನ್ನು ವಾಪಾಸ್‌ ಮನೆಗೆ ತರಲು ಸಂಜೆ ತೆರಳಿದ್ದ ವೇಳೆ ಅವಘಡ ಸಂಭವಿಸಿದೆ.

ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಳೆಯಿಂದಾಗಿ ತೋಟದಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2