tamanvi
ಸ್ಥಳೀಯ

ಮುಂಡೂರು ಗ್ರಾಪಂನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ನಾಯಕ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಸಂದೇಶ ನೀಡಿದರು. ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು.

ಶಾಲಾ ಮುಖ್ಯಗುರು, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಪದಾಧಿಕಾರಿಗಳು, ಮಹಾಲಿಂಗೇಶ್ವರ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ಎನ್‌ಬಿಕೆ ಹಾಗೂ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸೂರಪ್ಪ ವಂದಿಸಿ, ಶಶಿಧರ್ ಕೆ. ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 137