tamanvi
ಸ್ಥಳೀಯ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. ಯುವಜನತೆ ದೇಶದ ಜವಾಬ್ದಾರಿಯುತ ನಾಗರಿಕರಾಗಿ ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಇದೇ ವೇಳೆ ಸಂಸ್ಥೆಯ ಸಿಬ್ಬಂದಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹಾಗೂ ಅಶ್ವಿನಿ ಕೃಷ್ಣ ಮುಳಿಯ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಕೃಷ್ಣ ನಾರಾಯಣ ಮುಳಿಯ ಅವರು, ಸ್ವಾತಂತ್ರ್ಯಾನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಅಭಿವೃದ್ಧಿಯ ಪಯಣವನ್ನು ಸ್ಮರಿಸಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ರಾಘವೇಂದ್ರ ಪಟೇಲ್ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಸಿಬ್ಬಂದಿಗೆ ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 128