tamanvi
ಸ್ಥಳೀಯ

ಪುತ್ತೂರಿನಲ್ಲಿ ‘ಡ್ರಗ್ಸ್ ಬೇಡ ಬ್ರೋ’ ಜಾಗೃತಿ; ಸಂಪ್ಯ ಪೊಲೀಸರಿಂದ ಬೈಕ್ ರ‍್ಯಾಲಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ‘ಡ್ರಗ್ಸ್ ಬೇಡ ಬ್ರೋ’ ಕಾರ್ಯಕ್ರಮದಡಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬೈಕ್ ರ‍್ಯಾಲಿ ನಡೆಯಿತು.

ಆ.15ರಂದು ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಿಂದ ಮುಕ್ರಂಪಾಡಿ–ಸೆಂಟ್ಯಾರುವರೆಗೆ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಠಾಣೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಕಾನೂನು ಸುವ್ಯವಸ್ಥೆ ಪಿಎಸ್‌ಐ ಗುಣಪಾಲ ಜೆ. ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ರ್ಯಾಲಿಯಲ್ಲಿ ಪಾಲ್ಗೊಂಡು, ‘ಡ್ರಗ್ಸ್ ಬೇಡ ಬ್ರೋ’ ಎಂಬ ಸಂದೇಶದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 135