tamanvi
ಸ್ಥಳೀಯ

ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಗೆ ನ್ಯಾಯಾಂಗ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಠಾಣೆ ಪೊಲೀಸರು ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಿಂದ ಬಸ್ ಹತ್ತಿದ ಆರೋಪಿ ಕುಳಿತು ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಬಳಿಕ ಬಾಲಕ ಮನೆಗೆ ತೆರಳಿದಾಗ ಆರೋಪಿಯು ಆತನನ್ನು ಹಿಂಬಾಲಿಸಿಕೊಂಡು ಮನೆಗೆ ಬಂದಿದ್ದು, ಅಲ್ಲಿ ಬಾಲಕನಿಗೆ ಕಿರುಕುಳ ನೀಡಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ತೊಂದರೆ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಬಾಲಕ ಹಾಗೂ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 179/2026ರ ಅಡಿಯಲ್ಲಿ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2)ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ವಿಟ್ಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 135