tamanvi
ಸ್ಥಳೀಯ

ಸೆಪ್ಟೆಂಬರ್ 2: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ರಜತ ಮಹೋತ್ಸವ ಸಂಭ್ರಮ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳ ಸಹಕಾರದೊಂದಿಗೆ 25 ವರ್ಷಗಳನ್ನು ಪೂರೈಸಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ದರ್ಬೆ, ಪುತ್ತೂರು ಶಾಖೆಯಲ್ಲಿ ರಜತ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.

ಸಂಸ್ಥೆಯ ಶಾಖೆಯು 2001ರಿಂದ ಸೇವೆ ಸಲ್ಲಿಸುತ್ತಿದ್ದು, 25 ವರ್ಷಗಳ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 2ರಂದು ಬೆಳಗ್ಗೆ 8.30ಕ್ಕೆ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ನಡೆಯಲಿದ್ದು, ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ಗ್ರಾಹಕರ ದಿನ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಸಂಸ್ಥೆಯೊಂದಿಗೆ ನಿರಂತರವಾಗಿ ಕೈಜೋಡಿಸಿರುವ ಗ್ರಾಹಕರು ಹಾಗೂ ಸದಸ್ಯರನ್ನು ಆತ್ಮೀಯವಾಗಿ ಗೌರವಿಸಲಾಗುವುದು.

25 ವರ್ಷಗಳ ಸೇವಾ ಪಯಣವನ್ನು ಸ್ಮರಿಸುವ ಈ ವಿಶೇಷ ಸಂದರ್ಭದಲ್ಲಿ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳ ನಿರಂತರ ಸಹಕಾರಕ್ಕೆ ಸಂಸ್ಥೆಯ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ. ರಜತ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಸ್ಥೆ ಮನವಿ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 130