tamanvi
ಸ್ಥಳೀಯ

ಕಬಕ ಪುತ್ತೂರಿನಲ್ಲಿ ವಂದೇ ಭಾರತ್ ನಿಲುಗಡೆಗೆ ಆಗ್ರಹ: ಸಹಿ ಅಭಿಯಾನ ಆರಂಭ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಆಗ್ರಹಿಸಿ ಪುತ್ತೂರು–ಸುಬ್ರಹ್ಮಣ್ಯ ರೈಲು ಬಳಕೆದಾರರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ವತಿಯಿಂದ ಸಹಿ ಅಭಿಯಾನ ಆರಂಭಿಸಲಾಗಿದೆ.

ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರದಲ್ಲೇ ಸಂಚಾರ ಆರಂಭಿಸಲಿದ್ದು, ಪ್ರಸ್ತುತ ಪ್ರಸ್ತಾಪಿಸಲಾದ ನಿಲುಗಡೆ ಪಟ್ಟಿಯಲ್ಲಿ ಕಬಕ ಪುತ್ತೂರು ರೈಲು ನಿಲ್ದಾಣವನ್ನು ಸೇರಿಸಲಾಗಿಲ್ಲ. ಇದರಿಂದ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ವಿಟ್ಲ, ಬೆಳ್ಳಾರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಸಾವಿರಾರು ರೈಲು ಪ್ರಯಾಣಿಕರಿಗೆ ಅನಾನುಕೂಲವಾಗಲಿದೆ ಎಂದು ಸಮಿತಿ ತಿಳಿಸಿದೆ.

ಪ್ರಯಾಣಿಕರ ಹಿತದೃಷ್ಟಿಯಿಂದ ಕಬಕ ಪುತ್ತೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಿಲುಗಡೆ ನೀಡುವಂತೆ ಒತ್ತಾಯಿಸಿ ಈ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅಭಿಯಾನದ ಅವಧಿ: ಆಗಸ್ಟ್ 21ರಂದು ಮಧ್ಯಾಹ್ನ 1.30ರಿಂದ ಆಗಸ್ಟ್ 24ರ ರಾತ್ರಿ 12 ಗಂಟೆಯವರೆಗೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಬೇಕು ಹಾಗೂ ಈ ಮನವಿಯನ್ನು ಸ್ನೇಹಿತರು ಮತ್ತು ಕುಟುಂಬಸ್ಥರೊಂದಿಗೆ ಹಂಚಿಕೊಳ್ಳುವಂತೆ ಸಮಿತಿ ಮನವಿ ಮಾಡಿದೆ.

ಸಹಿ ಮಾಡಲು: https://www.change.org/KabakaPutturVandeBharat

ಕಬಕ ಪುತ್ತೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಿಲುಗಡೆ ಕಲ್ಪಿಸುವ ಬೇಡಿಕೆಗೆ ಸಾರ್ವಜನಿಕರ ಒಂದು ಸಹಿಯೂ ಮಹತ್ವದ ಶಕ್ತಿ ನೀಡಲಿದೆ ಎಂದು ಸಮಿತಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 130