ಸ್ಥಳೀಯ

ದರ್ಬೆ ಗಲಾಟೆ ಪ್ರಕರಣ: ಸ್ವಯಂಪ್ರೇರಿತ ಬಂದ್’ಗೆ ಬಿಜೆಪಿ, ವಿಹಿಂಪ, ಭಜರಂಗದಳ ಬೆಂಬಲ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿ, ಪೊಲೀಸರ ಎದುರಲ್ಲೇ ಮಹಿಳೆಯ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗಿಂದಲೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ.

ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿರುವ ವೇದಿಕೆ, ಪ್ರಕರಣಗಳ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ವ್ಯವಸ್ಥಿತ ಪಿತೂರಿ ಇದೆ ಎಂದು ಆರೋಪಿಸಿದೆ.

ನಗರದಲ್ಲಿ ವರ್ತಕರ ಹಿತರಕ್ಷಣೆ, ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುತ್ತೂರಿನ ಎಲ್ಲ ಸಮಾಜ ಬಾಂಧವರು ಹಾಗೂ ನಾಗರಿಕರು ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಸಹಕರಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ.

ಈ ಕುರಿತು ಆ.24ರಂದು ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಡಿಸೆಂಬರ್ 20ರ ಒಕ್ಕಲಿಗ ಗೌಡ ಸಮುದಾಯದ ವಾರ್ಷಿಕ ಸಮಾವೇಶಕ್ಕೆ ಪುತ್ತೂರು ವಲಯ ಸಜ್ಜು – ಮನೆಮನೆಗೆ ಆಹ್ವಾನ ನೀಡಲು ನಿರ್ಧಾರ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

ಡಿ. 20ರ ಒಕ್ಕಲಿಗ ಸಮುದಾಯದ ವಾರ್ಷಿಕ ಸಮಾವೇಶದ ಪ್ರಚಾರಕ್ಕೆ ಕುಂಬ್ರ ವಲಯದ ಸಿದ್ಧತೆ – ತಾಲೂಕು ಕ್ರೀಡಾಕೂಟದ ಕುರಿತು ಚರ್ಚೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

1 of 140