tamanvi
ಅಪರಾಧಸ್ಥಳೀಯ

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ ನಂಬಿಸಿ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿ, ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪಡೀಲ್ ನಿವಾಸಿ ಅದ್ದು ಪಡೀಲ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿ.

ಘಟನೆ ವಿವರ:

ಆ.23ರಂದು ರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ತಲುಪಿಸುವುದಾಗಿ ಹೇಳಿ ಆರೋಪಿ ತನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಮನೆಗೆ ತೆರಳುವ ದಾರಿ ಮಧ್ಯೆ ಬಾಲಕಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ಬಳಿಕ ಆಘಾತಕ್ಕೊಳಗಾದ ಬಾಲಕಿ ಮನೆಗೆ ತೆರಳಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಬಾಲಕಿಯ ತಾಯಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

BNS, ಪೋಕ್ಸೋ ಕಾಯ್ದೆಯಡಿ ಪ್ರಕರಣ:

ತಾಯಿ ನೀಡಿದ ದೂರಿನ ಆಧಾರದ ಮೇಲೆ ಅಪರಾಧ ಕ್ರಮಾಂಕ 46/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಆರೋಪಿಯ ಪತ್ತೆ ಹಾಗೂ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 248