tamanvi
ಕರಾವಳಿಸ್ಥಳೀಯ

ಮಂಗಳೂರು: ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಮೃತ್ಯು…!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ.

ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 185