ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಆ.29ರಂದು ಪುತ್ತೂರಿನಲ್ಲಿ ನಡೆಯಲಿದೆ.
ಶನಿವಾರ ಮಧ್ಯಾಹ್ನ 12.10ಕ್ಕೆ ಪುತ್ತೂರಿನ ಮೇರಿ ದೇವಾಸಿಯಾ ಸಭಾಂಗಣ, ಸರ್ಕಾರಿ ನೌಕರರ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀ ನವೀನ್ ಕುಮಾರ್ ಎಂ.ಎಸ್, ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್ ವಿಶ್ವನಾಥ ಅಜಿಲ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ , ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್ ಪಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರನ್ನು ಅಭಿನಂದಿಸುವುದು ಸೇರಿದಂತೆ ಸಂಘದ ಚಟುವಟಿಕೆಗಳು ಹಾಗೂ ನೌಕರರ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪುತ್ತೂರು ತಾಲೂಕು ಶಾಖೆ ಪ್ರಕಟಣೆಯಲ್ಲಿ ತಿಳಿಸಿದರೆ.
































