ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತ ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.
ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿದ ಬಳಿಕ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಯಾವುದೇ ಗಾಯ-ಹಾನಿ ಸಂಭವಿಸಿಲ್ಲ. ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಘಟನೆ ಬಳಿಕ ಕ್ರೇನ್ ಸಹಾಯದಿಂದ ಬಸ್‌ನ್ನು ಸ್ಥಳದಿಂದ ತೆರವುಗೊಳಿಸಲಾಯಿತು.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

































