tamanvi
ಸ್ಥಳೀಯ

ಬಡಗುಂಡಿಯಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆ: ಕಾನೂನು ಕ್ರಮಕ್ಕೆ ವಿಹಿಂಪ–ಬಜರಂಗದಳ ಆಗ್ರಹ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗುಂಡಿ ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ನೇತ್ರಾವತಿ ನದಿ ತೀರದಲ್ಲಿ ಕರುಳು ಸೇರಿದಂತೆ ಮಾಂಸದ ತ್ಯಾಜ್ಯಗಳನ್ನು ಎಸೆದು ಹೋಗಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಂಘಟನೆಗಳು ದೂರಿನಲ್ಲಿ ತಿಳಿಸಿದ್ದಾರೆ.

ನೇತ್ರಾವತಿ ನದಿಯ ನೀರನ್ನು ವಿವಿಧ ದೇವಸ್ಥಾನಗಳಲ್ಲಿ ಅಭಿಷೇಕ ಸೇರಿದಂತೆ ಧಾರ್ಮಿಕ ಕಾರ್ಯಗಳಿಗೆ ಬಳಸಲಾಗುತ್ತದೆ. ನದಿ ತೀರದಲ್ಲಿ ಮಾಂಸದ ತ್ಯಾಜ್ಯ ವಿಲೇವಾರಿ ಮಾಡಿರುವ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಹಿಂಪ ಹಾಗೂ ಬಜರಂಗದಳ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸಹಸಂಯೋಜಕ ಸಂತೋಷ್ ಸರಪಾಡಿ, ವಿಹಿಂಪ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ದೀಪಕ್ ಅಜೆಕಳ, ಗೋರಕ್ಷಾ ಪ್ರಮುಖ್ ತಿಲಕ್ ಕಿಣಿ, ಸಾಗರ್ ಕೊಯಿಲ, ಸಂದೇಶ್ ಕಾಡಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 131