tamanvi
ಸ್ಥಳೀಯ

ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ಪುತ್ತೂರು ಪುರಭವನದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಸಚಿವರಾದ ಯು.ಟಿ. ಖಾದರ್ ಫರೀದ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ.

ಸೆ.5ರಂದು ಬೆಳಗ್ಗೆ 11 ಗಂಟೆಯಿಂದ ಪುತ್ತೂರು ಪುರಭವನದಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಲು ಅವಕಾಶವಿದೆ.

ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸುವ ಅವಕಾಶವೂ ಸಭೆಯಲ್ಲಿ ಕಲ್ಪಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪುತ್ತೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 133