tamanvi
ವಿಶೇಷಸ್ಥಳೀಯ

ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ‘ಪುತ್ತೂರುದ ಪಿಲಿಗೊಬ್ಬು 2026’ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಶಶಾಂಕ್ ನೆಲ್ಲಿತ್ತಾಯ ಅವರು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ ಬಳಜ್ಜ ಹಾಗೂ ವಿಜಯ ಸಾಮ್ರಾಟ್ ತಂಡದ ಸದಸ್ಯರು ಉಪಸ್ಥಿತರಿದ್ದರು.

ಕರಾವಳಿಯ ಹುಲಿವೇಷದ ವೈಭವ, ಕಲಾವಿದರ ಪ್ರತಿಭೆ ಹಾಗೂ ಸಾಂಪ್ರದಾಯಿಕ ಸಂಭ್ರಮವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಡಲಿರುವ ‘ಪುತ್ತೂರುದ ಪಿಲಿಗೊಬ್ಬು 2026’ಗಾಗಿ ಸಿದ್ಧತೆಗಳು ಆರಂಭಗೊಂಡಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 140