Gl jewellers
ಕರಾವಳಿಸ್ಥಳೀಯ

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು! ನೆಹರುನಗರ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ, ನಿವೃತ್ತ ಸೈನಿಕ ಚಿದಾನಂದ ಕಾಮತ್ ಮೃತ್ಯು!!

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Akshaya College

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಅವಿವಾಹಿತ. ತನ್ನ ತಾಯಿ ಜೊತೆ ವಾಸವಾಗಿದ್ದಾರೆ.

ಮೃತರು ತಾಯಿ, ವಿವೇಕಾನಂದ ಕಾಲೇಜು ಉಪನ್ಯಾಸಕ ರಮಾನಂದ ಕಾಮತ್, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಕಟ್ಟಡದಲ್ಲಿರುವ ಕಾಮತ್ಸ್ ಸ್ವೀಟ್ಸ್ ಮಾಲಕ ಮಂಜುನಾಥ್ ಕಾಮತ್ ಸಹಿತ ಐವರು ಸಹೋದರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…