ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.11ರಂದು ಪುತ್ತೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮವು ಸೆ.11ರಂದು ಸಂಜೆ 5.30ರಿಂದ ಒಕ್ಕಲಿಗ ಗೌಡ ಸಮುದಾಯ ಭವನದ ಚಂದ್ರಶೇಖರಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ Major Donor ರೋ ಡಾ. ಸೂರ್ಯನಾರಾಯಣ ಕೆ., ನಿಯೋಜಿತ ಜಿಲ್ಲಾ ಗವರ್ನರ್, RI District-3181, 2028-29 ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಹಾಗೂ ರೋಟರಿ ಮತ್ತು ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ ಉಪಹಾರ, 6 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ 8 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಶಿಕ್ಷಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
























