ಸ್ಥಳೀಯ

ಜಾನಪದ ವಿದ್ವಾಂಸ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ನಾಳೆ ಶ್ರದ್ಧಾಂಜಲಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾಹಿತಿ, ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಹಾಗೂ ಅಧ್ಯಕ್ಷರೂ ಆಗಿದ್ದ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮೇ 21ರಂದು ಸಂಜೆ 4ಕ್ಕೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.

maithri

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘ ಹಾಗೂ ಬೊಳುವಾರು ವಿಶ್ವಕರ್ಮ ಯುವ ಸಮಾಜದ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರು ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವಕರ್ಮ ಯುವ ಸಮಾಜದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಶ್ರದ್ಧಾಂಜಲಿ ಸಭೆಯಲ್ಲಿ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಹಿತೈಷಿಗಳು, ಸಮಾಜ ಬಾಂಧವರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125